ಎಟಿಎಂ ಕಳ್ಳತನಕ್ಕೆ ಯತ್ನ- ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಸುರತ್ಕಲ್‌ನಲ್ಲಿ ಎಸ್‌ಕಾವೇಟರ್ ಬಳಸಿ ಎಟಿಎಂಗೆ ಕನ್ನ ಹಾಕಲು ಯತ್ನಿಸಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ನಗರ ಪೊಲೀಸರು ಬಂಧಿಸಿರುವ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ.


ಬಂಧಿತರನ್ನು ಶಿವಮೊಗ್ಗ ಮೂಲದ ದೇವರಾಜ್, ಭರತ್ ಎಚ್, ನಾಗರಾಜ ನಾಯ್ಕ್ ಮತ್ತು ಧನರಾಜ್ ನಾಯ್ಕ್ ಎಂದು ಗುರುತಿಸಲಾಗಿದೆ. ಬಂಧಿತ ನಾಲ್ವರು ಆರೋಪಿಗಳಿಂದ 50 ಸಾವಿರ ಮೌಲ್ಯದ ದ್ವಿಚಕ್ರ ವಾಹನ ಹಾಗೂ ಎರಡು ಮೊಬೈಲ್‌ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡು, ಅವರ ವಿರುದ್ಧ ಐಪಿಸಿ ಸೆಕ್ಷನ್ 457, 380, 511 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೇವರಾಜ್ ನಾಯ್ಕ್ ಹಾಗೂ ನಾಗರಾಜ ನಾಯ್ಕ ಎಂಬಿಬ್ಬರ ವಿರುದ್ಧ ಶಿಕಾರಿಪುರ ಪಟ್ಟಣ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ಆರೋಪಿಗಳು ಆಗಸ್ಟ್ 4ರಂದು ಮಧ್ಯರಾತ್ರಿ ಪಡುಬಿದ್ರಿ-ಕಾರ್ಕಳ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಅಗೆಯುವ ಯಂತ್ರವನ್ನು ಕದ್ದೊಯ್ದು, ನಂತರ ಅದನ್ನು ಎಟಿಎಂ ಕಳ್ಳತನಕ್ಕೆ ಬಳಸುತ್ತಿದ್ದರು ಎಂದೆನ್ನಲಾಗಿದೆ.

Also Read  ಕೋಡಿಂಬಾಳ: SSF & SYS ವತಿಯಿಂದ ತಾಜುಲ್ ಉಲಮಾ 9ನೇ ಆಂಡ್ ನೇರ್ಚೆ ➤ ಸುನ್ನೀ ಉಲಮಾಗಳ ಅನುಸ್ಮರಣೆ

error: Content is protected !!