ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ಶಾಲನ್ನು ಕೊರಳಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ದಿವ್ಯಾ ಎಂದು ಗುರುತಿಸಲಾಗಿದೆ. ಆದಿತ್ಯವಾರದಂದು ರಜೆ ಹಿನ್ನೆಲೆ ಪತಿ ಜಯರಾಮ ಮತ್ತು ಮಕ್ಕಳು ಬೆಳಂದೂರಿನಲ್ಲಿರುವ ತಂಗಿಯ ಮನೆಗೆ ಹೋಗಿದ್ದರು. ಮಧ್ಯಾಹ್ನ ಮನೆಗೆ ಹಿಂದಿರುಗುವಾಗ ಮನೆಯಲ್ಲಿ ದಿವ್ಯಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಮೃತರ ತಾಯಿ ನೀಡಿದ ದೂರಿನಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top