ತಮಿಳುನಾಡು ಮೂಲದ ದಂಪತಿ ಸುಳ್ಯದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 22. ತಮಿಳುನಾಡು ಮೂಲದ ದಂಪತಿ ಎಲಿಮಲೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರದಂದು ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರನ್ನು ರಾಜನ್ ಎಂದು ಗುರುತಿಸಲಾಗಿದೆ. ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಸ್ವತಃ ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ. ರಾಜನ್ ರವರು ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Also Read  ಶಿರಾಡಿ: ಕಾರು ಹಾಗೂ ಬಸ್ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

error: Content is protected !!
Scroll to Top