ಚಂದ್ರಯಾನ-3 ಯಶಸ್ಸಿಗೆ ಕುಕ್ಕೇ ಸುಬ್ರಹ್ಮಣ್ಯ ದೇವರಿಗೆ ಕುಕ್ಕೇ ಶ್ರೀ ಆಡಳಿತ ಮಂಡಳಿಯಿಂದ ವಿಶೇಷ ಸೇವೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಇಸ್ರೋ ಸಂಸ್ಥೆಯ ಚಂದ್ರಯಾನ-3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿ ದಿನದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿತ ಮಂಡಳಿ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಲಾಯಿತು.

 

ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ-3 ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಆಗಿ ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ನಮ್ಮ ರಾಷ್ಟ್ರದ ಹೆಸರು ಪ್ರಪಂಚದಲ್ಲಿ ಅಗ್ರಗಣ್ಯವಾಗಲಿ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ನೇತೃತ್ವದಲ್ಲಿ ದೇವಳದ ಆಡಳಿತ ಮಂಡಳಿ, ಊರ ಹಿರಿಯರು ಮತ್ತು ಸಾರ್ವಜನಿಕ ಭಕ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೇ ಇಸ್ರೋ ಸಂಸ್ಥೆಯ ಪರವಾಗಿ ನಾಗರಾಜನಿಗೆ ಹಾಲು ಅರ್ಪಿಸಲಾಯಿತು.

Also Read  ಆತೂರು: ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನ ಅಪಘಾತ ಹಿನ್ನೆಲೆ ➤ ಸಾರ್ವಜನಿಕರಿಂದ ಪ್ರತಿಭಟನೆ, ಪೊಲೀಸ್ ಶೆಡ್ ಧ್ವಂಸ


ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಪಿಜಿಎಸ್‌ಎನ್ ಪ್ರಸಾದ್, ಮನೋಹರ ರೈ, ಲೋಕೇಶ್ ಮುಂಡುಕಜೆ, ವನಜಾ.ವಿ.ಭಟ್, ಶೋಭಾ ಗಿರಿಧರ್, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

error: Content is protected !!
Scroll to Top