ಬೇಕರಿ ಮಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 22. ಬೇಕರಿ ಅಂಗಡಿ ಮಾಲೀಕ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕುತ್ತಾರು ಸಮೀಪದ ಶಾಂತಿಬಾಗ್ ಎಂಬಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮೂಲತಃ ಹಾಸನ ಜಿಲ್ಲೆಯ ಹಳೇಬೀಡು ರಸ್ತೆಯ ಬಲ್ಲೇನಹಳ್ಳಿ ನಿವಾಸಿ ರುದ್ರೇಶ್‌ ಎಂದು ಗುರುತಿಸಲಾಗಿದೆ. ಮಾಡಿಕೊಂಡವರು. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಶಾಂತಿಬಾಗ್‌ ಬಳಿಯ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಹಾಸನದಿಂದ 12 ವರ್ಷಗಳ ಹಿಂದೆ ಬಂದಿದ್ದ ರುದ್ರೇಶ್‌ ಕುತ್ತಾರು ಹಾಗೂ ಯೆನೆಪೋಯ ಆಸ್ಪತ್ರೆ ಬಳಿ ಬೆಂಗಳೂರ್‌ ಅಯ್ಯಂಗಾರ್‌ ಬೇಕರಿಯನ್ನು ನಡೆಸುತ್ತಿದ್ದರು. ಸೋಮವಾರದಂದು ಬೆಳಗ್ಗೆ ಬೇಕರಿಯಿಂದ ಮನೆಗೆ ಚಹಾ ಕುಡಿಯಲೆಂದು ಹೋದವರು ವಾಪಸ್ಸು ಬೇಕರಿಗೆ ಹೋಗಿರಲಿಲ್ಲ. ಇತ್ತ ಮನೆಯಲ್ಲಿ ರುದ್ರೇಶ್‌ ಒಂದು ಕೋಣೆಯಲ್ಲಿ ಮಲಗಿದ್ದರೆ, ಪತ್ನಿ ಇನ್ನೊಂದು ಕೋಣೆಯಲ್ಲಿ ಮಲಗಿದ್ದರು. ಸಂಜೆ ಪತ್ನಿ ಹೇಮಲತಾ ನಿದ್ರೆಯಿಂದ ಎದ್ದಾಗ ಪತಿ ಏಳದೇ ಇರುವುದನ್ನು ಗಮನಿಸಿ ಬಾಗಿಲು ಮುರಿದು ನೋಡಿದಾಗ ರುದ್ರೇಶ್‌ ಕೋಣೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರುದ್ರೇಶ್‌ ಆಗಾಗ ಹೃದಯಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಪತ್ನಿ ಹೇಮಲತಾ ಕೆಲ ದಿನಗಳ ಹಿಂದೆಯಷ್ಟೇ ಕಿವಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಆಟವಾಡುತ್ತಾ ಹಾವನ್ನೇ ಕಚ್ಚಿದ ಮಗು - ಹಾವು ಸಾವು

error: Content is protected !!
Scroll to Top