ಇನ್ಮುಂದೆ ಸುಳ್ಳು ಸುದ್ದಿ ಹಬ್ಬಿಸಿದರೆ ಕೇಸ್ ಫಿಕ್ಸ್ – ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಸಿಎಂ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 22. ಇನ್ಮುಂದೆ ಸುಳ್ಳು ಸುದ್ದಿ ಬಿತ್ತರಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರದಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಯಿತು. ಈ ವೇಳೆ ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

Also Read  ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಹಾಕಲೇಬೇಕು-ಹೈ ಕೋರ್ಟ್

error: Content is protected !!
Scroll to Top