ಅನ್ಯಕೋಮಿನ ಯುವಕನ ಮೇಲೆ ತಲವಾರು ದಾಳಿ ಪ್ರಕರಣ – 24 ಗಂಟೆಯೊಳಗೆ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಅನ್ಯ ಕೋಮಿನ ಯುವಕನ ಮೇಲೆ ಮೂವರ ಗುಂಪೊಂದು ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 24 ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ ಘಟನೆ ನಗರದ ಕಾವೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತರನ್ನು ಮಂಗಳೂರಿನ ಪಂಚಮೊಗರು ನಿವಾಸಿ ಚರಣ್ ರಾಜ್(23), ಸುರತ್ಕಲ್‌ನ ಸುಮಂತ್ ಬರ್ಮನ್(23) ಹಾಗೂ ಸುಂಕದಕಟ್ಟೆ ಕೋಡಿಕಲ್ ನಿವಾಸಿ ಅವಿನಾಶ್ (24) ಎಂದು ಗುರುತಿಸಲಾಗಿದೆ.


ಆ. 20ರ ಭಾನುವಾರದಂದು ಅನ್ಯಕೋಮಿನ ಯುವಕನೋರ್ವ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಗಳಾದ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂಬವರು ಸ್ಕೂಟಿಯಲ್ಲಿ ಬಂದು ಆತನನ್ನು ತಡೆದು ತಲವಾರಿನಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಯುವಕನ ಮುಖಕ್ಕೆ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಯುವಕ ನೀಡಿದ ದೂರಿನನ್ವಯ ಕಾರ್ಯಪ್ರವೃತ್ತರಾದ ಪೊಲೀಸರು 24 ಗಂಟೆಯೊಳಗೆ ತಲವಾರು, ವಾಹನ ಸಮೇತ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣವನ್ನು ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್‌, ಡಿಸಿಪಿಗಳಾದ ಅಂಶು ಕುಮಾರ್, ದಿನೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಎಸಿಪಿ ಮನೋಜ್ ಕುಮಾರ್ ರವರ ಸಲಹೆಯಂತೆ ತನಿಖಾ ತಂಡ ಮೂವರು ಆರೋಪಿಗಳನ್ನು ಬಂಧಿಸಿದೆ.

Also Read  ಮಂಗಳೂರು: ಸಮಗ್ರ ಕೃಷಿ ಪದ್ಧತಿ ಉತ್ಕೃಷ್ಟತಾ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ !

error: Content is protected !!
Scroll to Top