ಕೊರಗಜ್ಜನ ಆದಿಕ್ಷೇತ್ರಕ್ಕೆ ನಟಿ ಪ್ರಿಯಾಂಕ ಭೇಟಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಆ. 22. ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ಕುತ್ತಾರಿನ ಕೊರಗಜ್ಜ ದೈವದ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜನಿಗೆ ಜಿಲ್ಲೆ ಮಾತ್ರವಲ್ಲದೇ ದೇಶ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದು, ಹಾಗಾಗಿ ಸೆಲೆಬ್ರಿಟಿಗಳೂ ಇತ್ತೀಚಿನ ದಿನಗಳಲ್ಲಿ ಕೊರಗಜ್ಜನ ಆದಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಇಷ್ಟಾರ್ಥ ನೆರವೇರಿಸುವಂತೆ ಹರಕೆಯನ್ನೂ ಹೊತ್ತು ತೆರಳುತ್ತಿರುತ್ತಾರೆ.


ನೂತನ ಸಿನೆಮಾ ಚಿತ್ರೀಕರಣಕ್ಕೆ ಬಂದಿದ್ದ ನಟಿ ಪ್ರಿಯಾಂಕ ಅವರು ಶುಕ್ರವಾರದಂದು ಮಧ್ಯಾಹ್ನ ಚಿತ್ರ ತಂಡದೊಂದಿಗೆ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಟ ಉಪೇಂದ್ರ ಅವರು ಹೊಲಗೇರಿ ಹೇಳಿಕೆಯಿಂದಾಗಿ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದಲ್ಲದೇ ಪೊಲೀಸ್ ಕೇಸನ್ನೂ ಎದುರಿಸುತ್ತಿದ್ದಾರೆ. ಇದರ ನಡುವೆಯೇ ಪತ್ನಿ ಪ್ರಿಯಾಂಕ ಬಂದು ಸಂಕಷ್ಟ ದೂರ ಮಾಡುವಂತೆ ಕೊರಗಜ್ಜನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

Also Read  ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ➤ ಮಾದಕ ವಸ್ತುಗಳ ಸಹಿತ ಮೂವರು ಅರೆಸ್ಟ್

error: Content is protected !!
Scroll to Top