ಅನಧಿಕೃತ ಬ್ಯಾನರ್ ಅಳವಡಿಕೆ – ಡಿಕೆ ಶಿವಕುಮಾರ್ ಗೆ 50 ಸಾವಿರ ರೂ. ದಂಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 22. ಇಲ್ಲಿನ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಅನಧಿಕೃತವಾಗಿ ಬ್ಯಾನರ್ ಅಳವಡಿಸಿದ ಹಿನ್ನೆಲೆ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ 50 ಸಾವಿರ ರೂ. ದಂಡ ವಿಧಿಸಿ ಬಿಬಿಎಂಪಿ ಆದೇಶಿಸಿದೆ.


ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಜನ್ಮ ದಿನಾಚರಣೆಯ ಪ್ರಯುಕ್ತ ಅನುಮತಿ ಪಡೆಯದೇ ಕಾಂಗ್ರೆಸ್ ಬ್ಯಾನರ್ ಅಳವಡಿಸಿತ್ತು. ಹೀಗಾಗಿ ದಂಡ ವಿಧಿಸಿದ ಬಿಬಿಎಂಪಿ ದಂಡವನ್ನು ಪಾಲಿಕೆಯ ಮುಖ್ಯ ಆಯುಕ್ತರ ಖಾತೆಗೆ ಪಾವತಿಸುವಂತೆ ಸೂಚನೆ ನೀಡಿದೆ.

Also Read  ಚಿನ್ನದ ದರ ಮತ್ತೆ ಇಳಿಕೆ

error: Content is protected !!
Scroll to Top