(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಆ. 22. ಭಾರತೀಯ ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ನಾಳೆ ಚಂದ್ರನ ಅಂಗಳದಲ್ಲಿ ಚಂದ್ರಯಾನ 3 ರ ಲ್ಯಾಂಡರ್ ಕಾಲಿಡಲಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪನೆಗೆ ನಾಳೆ ಸಂಜೆ ಇಡೀ ದೇಶವೇ ಸಾಕ್ಷಿಯಾಗಲಿದೆ.
ಈ ಐತಿಹಾಸಿಕ ಕ್ಷಣವನ್ನು ವೀಕ್ಷಿಸಲು ಉತ್ತರಪ್ರದೇಶದ ಎಲ್ಲಾ ಶಾಲೆಗಳನ್ನು ಆಗಸ್ಟ್ 23 ರಂದು ಸಂಜೆ 5:15 ರಿಂದ 6:15 ರವರೆಗೆ ತೆರೆದಿಡಲು ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಬಗ್ಗೆ ಸೂಚನೆ ನೀಡಿರುವ ಶಾಲಾ ಶಿಕ್ಷಣ ನಿರ್ದೇಶಕ ವಿಜಯ್ ಕಿರಣ್ ಆನಂದ್ ಎಲ್ಲ ಜಿಲ್ಲೆಗಳ ಮೂಲ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲ ಮಕ್ಕಳಿಗೆ ನೇರಪ್ರಸಾರದ ಮೂಲಕ ಚಂದ್ರಯಾನ 3ರ ಲ್ಯಾಂಡಿಂಗ್ ಪ್ರಕ್ರಿಯೆಯನ್ನು ತೋರಿಸಬೇಕು ಎಂದು ಆದೇಶಿಸಿದ್ದಾರೆ.