ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬಡಗನ್ನೂರು ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ಮಹಿಳೆಯರನ್ನು ಗಿರಿಜಾ ಮತ್ತು ಸುಲೇಖ ಎಂದು ಗುರುತಿಸಲಾಗಿದೆ. ಮಹಿಳೆಯರಿಬ್ಬರು ಬಡಗನ್ನೂರು ಸಮೀಪದ ಗುಡ್ಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿ ಮಾರಣಾಂತಿಕ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. ಗಂಭೀರ ಗಾಯಗೊಂಡ ಮಹಿಳೆಯರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಇಬ್ಬರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಗೋಳಿತೊಟ್ಟು ಮೂಲದ ಗಿರಿಜಾ ಬಡಗನ್ನೂರು ನಿವಾಸಿ ಸುಲೇಖ ರವರ ಮನೆಯಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರೆನ್ನಲಾಗಿದೆ. ಹಲ್ಲೆಗೆ ನಿಖರ ಕಾರಣ ತನಿಖೆ ನಂತರವಷ್ಟೇ ತಿಳಿಯಬೇಕಿದೆ.

Also Read  ಮಳೆಗೆ ಕೃಷಿ ತೋಟ ಜಲಾವೃತ

error: Content is protected !!
Scroll to Top