ಇಂದು ಚಂದ್ರಯಾನ-3ರ ನೇರಪ್ರಸಾರ ಶಾಲಾ- ಕಾಲೇಜುಗಳಲ್ಲಿ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಇಡೀ ದೇಶವು ಕಾತುರದಿಂದ ನಿರೀಕ್ಷಿಸುತ್ತಿರುವ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಕ್ಷಣವನ್ನು ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ಈ ಸಮಯದಲ್ಲಿ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ವ್ಯವಸ್ಥೆಯನ್ನು ಮಾಡುತ್ತಿದೆ.
ಆ. 23ರ ಬುಧವಾರದಂದು ಸಂಜೆ 5.20ರಿಂದ 6.30ರ ವರೆಗೆ ಚಂದ್ರನ ಸನಿಹದಲ್ಲಿ ನಡೆಯುವ ಈ ಕೌತುಕವನ್ನು ವೀಕ್ಷಿಸಲು ಕೇಂದ್ರದ ಸಭಾಭವನದಲ್ಲಿ ದೊಡ್ಡ ಪರದೆಯ ಮೇಲೆ ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಕೇಂದ್ರದ ಸಿಬ್ಬಂದಿ ಇದರ ಬಗೆಗಿನ ಮಾಹಿತಿ ಹಾಗೂ ವೈಶಿಷ್ಟ್ಯಗಳನ್ನು ಆಸಕ್ತರಿಗೆ ವಿವರಿಸುವರು.

ಈ ರೀತಿಯ ಪ್ರಸಾರಕ್ಕೆ ವ್ಯವಸ್ಥೆಯಿರುವ ಎಲ್ಲಾ ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳು ನಮ್ಮ ವಿಜ್ಞಾನಿಗಳ ಈ ಸಾಧನೆಯ ನೇರ ಪ್ರಸಾರವನ್ನು ವೀಕ್ಷಿಸಲು ವ್ಯವಸ್ಥೆಯನ್ನು ಮಾಡಿ, ವಿದ್ಯಾರ್ಥಿಗಳಲ್ಲಿ ಇಂತಹ ಸಾಧನೆಗಳನ್ನು ಮಾಡಲು ಸ್ಫೂರ್ತಿ ನೀಡುವ ಪ್ರಯತ್ನವನ್ನು ಮಾಡಬೇಕು. ಈ ಪ್ರಯತ್ನದಲ್ಲಿ ಭಾಗಿಯಾಗುವ ವಿಜ್ಞಾನ ಕೇಂದ್ರವು ಆಸಕ್ತರನ್ನು ನೇರ ಪ್ರಸಾರಕ್ಕೆ ಆಹ್ವಾನಿಸುತ್ತದೆ.

Also Read  ಆಕ್ಟಿವಾ ಹಾಗೂ ಓಮ್ನಿ ಕಾರು ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ


ಈ ಅಪೂರ್ವ ಅವಕಾಶಕ್ಕಾಗಿ ಕೇಂದ್ರವು ಇಸ್ರೋ ಸಂಸ್ಥೆಯನ್ನು ಅಭಿನಂದಿಸಿದೆ. ವಿಜ್ಞಾನ ಕೇಂದ್ರವನ್ನು ಚಂದ್ರಯಾನ-3ರ ಮಾಹಿತಿ ಹಾಗೂ ಅರಿವನ್ನು ಅಲ್ಲಿಯ ವಿಜ್ಞಾನಿಗಳ ಸಹಕಾರದಿಂದ ಅಧ್ಯಾಪಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಾರ್ಯಕ್ರಮಗಳನ್ನು ಕೇಂದ್ರದಲ್ಲಿ ನಡೆಸುವ ಅವಕಾಶ ನೀಡಿದ್ದಕ್ಕಾಗಿ ತನ್ನ ಕೃತಜ್ಞತೆಯನ್ನು ಸಲ್ಲಿಸುತ್ತದೆ ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top