ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಬಿ.ಎನ್.ಬಚ್ಚೇಗೌಡ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಆ. 23. ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ.


ಚಿಕ್ಕಬಳ್ಳಾಪುರ ‌ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಬಚ್ಚೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ ಎಪ್ಪತ್ತು ವರ್ಷ ವಯಸ್ಸಿಗೆ ನಿವೃತ್ತಿಯಾಗಬೇಕು. ಇದೀಗ ನನಗೆ ಎಂಬತ್ತೊಂದು ವರ್ಷ ವಯಸ್ಸಾಗಿದೆ. ಅರ್ಥಪೂರ್ಣ ಸಮಾರಂಭವನ್ನೂ‌ ಆಚರಣೆ ಮಾಡಿಕೊಂಡಿದ್ದೇವೆ. ನನಗೆ ಪಕ್ಷದಲ್ಲಿ ಟಿಕೆಟ್ ಕೊಡುವುದಿಲ್ಲ ಅಂತ ಪ್ರಧಾನಿ ಮೋದಿ ಹೇಳಿಬಿಟ್ಟಿದ್ದಾರೆ. ಹೀಗಾಗಿ ನಿವೃತ್ತಿಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ. ಬಿಎನ್ ಬಚ್ಚೇಗೌಡ ಅವರು ಜನತಾ ಪಕ್ಷದೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ, ಬಳಿಕ ಬಿಜೆಪಿ ಸೇರಿದ ಅವರು 2008 ರಿಂದ ಬಿಜೆಪಿ ಸದಸ್ಯರಾಗಿ ಚುನಾವಣೆಗೆ ಸ್ಪರ್ಧಿಸಿ ಐದು ಬಾರಿ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

Also Read  ಜೋಡುಪಾಲದ ಪ್ರಾಕೃತಿ ವಿಕೋಪಕ್ಕೆ ಸಿಲುಕಿ ಮನೆ ಕಳೆದುಕೊಂಡ ಜೀವಕ್ಕೆ ಕೊನೆಗೂ ಮುಕ್ತಿ

error: Content is protected !!
Scroll to Top