ಪಡಿತರ ಚೀಟಿ ತಿದ್ದುಪಡಿಗೆ ಸೆ. 01ರಿಂದ 10ರ ವರೆಗೆ ಕಾಲಾವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ನೀಡಿದ್ದ ಕಾಲಾವಕಾಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದ್ದು, ಸೆಪ್ಟೆಂಬರ್ 1ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಕೆಗೆ ಆಗಸ್ಟ್ 21ರಂದು ಕೊನೆಯ ದಿನಾಂಕ ನೀಡಲಾಗಿತ್ತು. ಆದರೆ ಹಲವೆಡೆ ಸರ್ವರ್ ಸಮಸ್ಯೆ ಕಾಣಿಸಿಕೊಂಡ ಕಾರಣ ತುಂಬಾ ಜನರು ತಿದ್ದುಪಡಿ ಅರ್ಜಿ ಸಲ್ಲಿಕೆ ಮಾಡಲಾಗದೇ ಮನೆಗೆ ತೆರಳಿದ್ದರು.

ಇದೀಗ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್‌ 01 ರಿಂದ 10 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ತನಕ ಅವಕಾಶ ಕಲ್ಪಿಸಲಾಗಿದೆ.

Also Read  ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆ ➤ ಬೀದಿಬದಿ ವ್ಯಾಪಾರ ಮಹಿಳೆಯರಿಗೆ ಪ್ರೋತ್ಸಾಹ ಧನ

error: Content is protected !!
Scroll to Top