ಕಾವೇರಿ ನೀರು ಹಂಚಿಕೆ ವಿವಾದ- ತ್ರಿ ಸದಸ್ಯ ಪೀಠ ರಚಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಕಾವೇರಿ ನದಿ ನೀರು ಹಂಚಿಕೆಯ ವಿವಾದ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದು, ಈ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡಿ ಆದೇಶಿಸಿದೆ.

ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಪ್ರತ್ಯೇಕ ಪೀಠ ರಚನೆಗೆ ಒಪ್ಪಿಗೆ ನೀಡಿತ್ತು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಮೂರ್ತಿ ಪಿಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಬಿಕೆ ಮಿಶ್ರಾ ಅವರು ತ್ರಿ ಸದಸ್ಯ ಪೀಠದಲ್ಲಿದ್ದಾರೆ.

Also Read  ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು..!

error: Content is protected !!
Scroll to Top