ಕಾಂಗ್ರೆಸ್ ಸೇರಲಿರುವ ನಾಯಕರನ್ನು ತಡೆಯದಂತೆ ಬಿಜೆಪಿ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಬಯಸುವ ಬಿಜೆಪಿ ಪಕ್ಷದ ನಾಯಕರನ್ನು ತಡೆಯದಂತೆ ಬಿಜೆಪಿ ಕರ್ನಾಟಕ ಘಟಕಕ್ಕೆ ಸೂಚನೆ ನೀಡಲಾಗಿದೆ.

ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಆಪರೇಷನ್‌ ಹಸ್ತದ ಮೂಲಕ ಬಿಜೆಪಿಯ 10ರಿಂದ 15 ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದರು. ಮಾಜಿ ಸಚಿವರೂ ಹಾಗೂ ಬಿಜೆಪಿ ಶಾಸಕರು ಆದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಾಮರಾಜನಗರ ಕ್ಷೇತ್ರದಿಂದ ಸೋತಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಪಕ್ಷವು ಈ ಬಗ್ಗೆ ನಿರ್ಧಾರ ಕೈಗೊಂಡ ನಂತರ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ. ಸೋಮವಾರದಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಹಿರಿಯ ಮುಖಂಡರು ಭಾಗವಹಿಸಿದ್ದ ಕೋರ್ ಕಮಿಟಿ ಸಭೆಯಲ್ಲಿ ಕೇಸರಿ ಪಕ್ಷ ತೊರೆಯಲು ಬಯಸುವ ನಾಯಕರನ್ನು ತಡೆಯದಿರುವ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

Also Read  ಮದ್ಯ ಪ್ರಿಯರಿಗೆ ಬಿಗ್​ ಶಾಕ್​​.!  ➤ ಈ 3 ದಿನ ರಾಜ್ಯದಲ್ಲಿ ಎಣ್ಣೆ ಸಿಗೋದಿಲ್ಲ!!

error: Content is protected !!
Scroll to Top