ಉಪ್ಪಿನಂಗಡಿ- ಸುಬ್ರಮಣ್ಯ ರಾಜ್ಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ – ದುರಸ್ತಿಗಾಗಿ ಕೆಮ್ಮಾರ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಲೋಕೋಪಯೋಗಿ ಇಲಾಖೆ ಮತ್ತು ಶಾಸಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 23. ಉಪ್ಪಿನಂಗಡಿ- ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಹಳೆಗೇಟುವಿನಿಂದ ಕೆಮ್ಮಾರ ಕೊಯಿಲದ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಅವೈಜ್ಞಾನಿಕ ಮತ್ತು ಅಸಮರ್ಪಕ ಕಾಮಗಾರಿಯಿಂದಾಗಿ ಮಳೆಗಾಲದಲ್ಲಿ ರಸ್ತೆ ಮಧ್ಯೆ ನೀರು ಹರಿದು ನಿಂತಿರುತ್ತದೆ. ಇದರಿಂದ ವಾಹನಗಳು ಸಂಚರಿಸುವಾಗ ಬಸ್ಸಿಗಾಗಿ ಕಾಯುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೆಸರು ನೀರು ಎರಚಿ ತೊಂದರೆಯಾಗುತ್ತಿದೆ. ಮಾತ್ರವಲ್ಲದೇ ಶಾಲಾ ವಠಾರ ಸ್ಥಳ ಗುರುತಿಸುವ ಕಿಲೋಮೀಟರ್, ತಿರುವು, ಅಪಘಾತ ವಲಯ ಸೇರಿದಂತೆ ಯಾವುದೇ ಸೂಚನಾ ಫಲಕ ಇಲ್ಲದಿರುವುದನ್ನು ಮತ್ತು ಸರಿಯಾದ ಚರಂಡಿ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು ಶ್ರೀ ಅಶೋಕ್ ಕುಮಾರ್ ರೈ ಮತ್ತು ಪುತ್ತೂರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲೋಕೋಪಯೋಗಿ ಇಲಾಖೆಗೆ ಕೆಮ್ಮಾರ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಕೆಮ್ಮಾರ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ಅಝೀಝ್ ಬಿ.ಕೆ, ವಾಮನ ಬರಮೇಲು, ಪದ್ಬನಾಭ ಶೆಟ್ಟಿ, ಮೋಹನದಾಸ ಶೆಟ್ಟಿ ಬಡಿಲ, ಅಬ್ದುಲ್ ಗಫ್ಫಾರ್ ಕೆಮ್ಮಾರ ಮೊದಲಾದವರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group