(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 23. ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿದು ಬಿದ್ದ ಪರಿಣಾಮ 17 ಮಂದಿ ಮೃತಪಟ್ಟಿರುವ ಘಟನೆ ಮಿಝೋರಾಂನ ಸಾಯಿರಾಂಗ್ ಪ್ರದೇಶದಲ್ಲಿ ಬುಧವಾರದಂದು ನಡೆದಿದೆ.
ಘಟನಾ ಸ್ಥಳದಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆಯಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಸೇತುವೆ ಕುಸಿಯುವ ವೇಳೆ ಸುಮಾರು 35 ರಿಂದ 40 ಕಟ್ಟಡ ಕಾರ್ಮಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.