(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಮೂಡಬಿದರೆಯ ಉಪನೋಂದಣಿ ಕಚೇರಿ ವ್ಯಾಪ್ತಿಯ ಗ್ರಾಮಗಳ ಸ್ಥಿರಾಸ್ತಿಗಳ ಮಾರ್ಗಸೂಚಿ ದರವನ್ನು 2023ರ ಸಾಲಿನಲ್ಲಿ ಪರಿಷ್ಕರಿಸಲಾಗಿದೆ. ಈ ದರಗಳಿಗೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಮೂಡಬಿದರೆಯ ಉಪನೋಂದಣಿ ಕಚೇರಿಯ ಹಿರಿಯ ಉಪನೋಂದಣಾಧಿಕಾರಿಗೆ 15 ದಿನಗಳೊಳಗೆ ಸಲ್ಲಿಸುವಂತೆ ಮೂಡಬಿದರೆ ಉಪನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ- ಆಕ್ಷೇಪಣೆಗಳಿಗೆ ಆಹ್ವಾನ
