ಸ್ವಯಂ ಉದ್ಯೋಗ ಯೋಜನೆಯಡಿ ಆನ್-ಲೈನ್ ಮೂಲಕ ಸಾಲ ಪಡೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. 2023-24ನೇ ಸಾಲಿನ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ, ನೇರ ಸಾಲ ಯೋಜನೆ, ಆರ್ಯವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲ ಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ- ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದ ವರಿಗೆ 3 ಲಕ್ಷ ರೂ.ಗಳ ಮಿತಿಯೊಳಗಿರಬೇಕು, 18 ರಿಂದ 45 ವರ್ಷದೊಳಗಿರಬೇಕು. ಈ ಯೋಜನೆಯಡಿ ಕನಿಷ್ಠ 50 ಸಾವಿರ ಗಳಿಂದ ಗರಿಷ್ಠ 1 ಲಕ್ಷ ರೂ ದವರೆಗೆ ಸಾಲ ಒದಗಿಸಲಾಗುವುದು. ಈ ಮಟ್ಟದಲ್ಲಿ ಶೇಕಡ 20ರಷ್ಟು ಸಹಾಯಧನ ಹಾಗೂ ಶೇಕಡ 80 ರಷ್ಟು ಸಾಲವನ್ನು ವಾರ್ಷಿಕ ಶೇಕಡ 4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. ಎರಡು ತಿಂಗಳ ವಿರಾಮ ಅವಧಿ ಇರುತ್ತದೆ. ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಆರ್ಯ ವೈಶ್ಯ ಆಹಾರ ವಾಹಿನಿ: ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರೆಗೆ 6 ಲಕ್ಷ ರೂ.ಗಳ ಮಿತಿಯೊಳಗಿರಬೇಕು, 21 ರಿಂದ 55 ವರ್ಷ ಒಳಗಿನವರಾಗಿರಬೇಕು. ಈ ಯೋಜನೆಯಡಿ ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್ ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿಷ್ಠ 2 ಲಕ್ಷಗಳ ಸಹಾಯಧನವನ್ನು ನೀಡಲಾಗುವುದು.

Also Read  ಕಾರ್ಕಳ: ಅಪ್ರಾಪ್ತ ಬಾಲಕನಿಂದ ನಕಲಿ ಮತದಾನ

ವಾಸವಿ ಜಲ ಶಕ್ತಿ ಯೋಜನೆ: ಈ ಯೋಜನೆಯಡಿ ಎರಡರಿಂದ 5 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯ ಪಡೆಯಲು ಸಾಲ ಹಾಗೂ ಸಹಾಯಧನ ನೀಡಲಾಗುವುದು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ.ಗಳ ಮಿತಿಯೊಳಗಿರಬೇಕು. 21 ರಿಂದ 50 ವರ್ಷದೊಳಗಿರಬೇಕು. ಗರಿಷ್ಠ 2 ಲಕ್ಷ ರೂ.ಗಳ ಸಾಲವನ್ನು ವಾರ್ಷಿಕ 4ರ ಬಡ್ಡಿ ದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ 50 ಸಾವಿರ ರೂ ಸಹಾಯಧನ ನೀಡಲಾಗುವುದು. 6 ತಿಂಗಳ ವಿರಾಮ ಅವಧಿಯಿದೆ. ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆ:ಈ ಯೋಜನೆಯಡಿ ಸಿಇಟಿ, ಎನ್‍ಇಇಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಎಚ್.ಡಿ ನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ 1 ಲಕ್ಷ ರೂ. ಗಳ ಸಾಲವನ್ನು 2ರ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ರಿಂದ 35 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರೆಗೆ 6 ಲಕ್ಷ ರೂ.ಗಳ ಮಿತಿಯೊಳಗಿರಬೇಕು. ಹೆಚ್ಚಿನ ಮಾಹಿತಿಗಾಗಿ 0824-2456544 ಸಂಪರ್ಕಿಸಬಹುದು ಅಥವಾ https://kacdc.karanataka.gov.inನಲ್ಲಿ ವಿವರಗಳನ್ನು ತಿಳಿಬಹುದು ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಲ್ಲುಗುಡ್ಡೆ: ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅಬಕಾರಿ ಇಲಾಖೆ ► ಕೊನೆಗೂ ಮದ್ಯದಂಗಡಿಗೆ ಬೀಗ ಮುದ್ರೆ ಹಾಕಿದ ಅಧಿಕಾರಿಗಳು

error: Content is protected !!
Scroll to Top