ದ್ವಿಚಕ್ರ ವಾಹನ ಕಳವು- ಆರೋಪಿ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 23. ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಪೊಲೀಸರು ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಆರೋಪಿ ತಾನು ಕಳವು ಮಾಡಿದ್ದ ಸ್ಕೂಟರ್ನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದನು. ಈ ಸಂದರ್ಭ ನಗರದ ಪಂಪ್ ವೆಲ್ ಬ್ರಿಡ್ಜ್ ಬಳಿ ಆತನನ್ನು ದಸ್ತಗಿರಿ ಮಾಡಿ ಆತನ ವಶದಲ್ಲಿದ್ದ ಕಳವು ಮಾಡಿದ್ದ ಸ್ಕೂಟರನ್ನು ಹಾಗೂ ಈ ಹಿಂದೆ ಈತನು ಕಳವು ಮಾಡಿದ್ದ ಮತ್ತೊಂದು ಹೋಂಡಾ ಆಕ್ಟಿವಾ ಸ್ಕೂಟರನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಆತನಿಂದ ಒಟ್ಟು ಸುಮಾರು ಒಂದು ಲಕ್ಷ ಹತ್ತು ಸಾವಿರ ರೂ. ಬೆಲೆ ಬಾಳುವ 2 ದ್ವಿಚಕ್ರ ವಾಹನಗಳನ್ನು ಮಂಗಳೂರು ಪೂರ್ವ ಪೊಲೀಸ ಠಾಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Also Read  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರಿಂದ ಕುಕ್ಕೆ ಕಾಮಗಾರಿಗಳ ಪರಿಶೀಲನೆ ➤ ಭಕ್ತರ ಅನುಕೂಲಕ್ಕೆ ಪ್ರತ್ಯೇಕ ಸುತ್ತು ಪೌಳಿ ನಿರ್ಮಾಣಕ್ಕೆ ಯೋಜನೆ

error: Content is protected !!
Scroll to Top