(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ರಾಶಿ ಹಾಕಿರುವವರ ಮೇಲೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂ.ಗಳ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಲಾಗಿರುವ ಕುರಿತು ವರದಿಯಾಗಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿ ಎಲ್ಲೆಂದರಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ತ್ಯಾಜ್ಯಗಳ ಬ್ಲಾಕ್ ಉಂಟಾಗಿ ನಗರದ ಸೌಂದರ್ಯಕ್ಕೆ ಹಾಗೂ ಸ್ವಚ್ಚತೆಗೆ ದಕ್ಕೆ ಉಂಟುಮಾಡುತ್ತಿದು, ಈ ರೀತಿಯ ಅನಧಿಕೃತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸ್ವಚ್ಚತೆಗೆ ದಕ್ಕೆ ತರುವವರ ವಿರುದ್ದ ದಂಡ ವಿಧಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ. ಆದ್ದರಿಂದ ನಗರದ ಮಣ್ಣಗುಡ್ಡ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ರಾಶಿ ಹಾಕಿರುವವರ ಮೇಲೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂ.ಗಳ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಲಾಗಿದೆ. ಇನ್ನು ಮುಂದೆ ಯಾರಾದರು ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.