ಆಯನೂರು ಮಂಜುನಾಥ್ ಸಹಿತ ಹಲವರು ಇಂದು ಕಾಂಗ್ರೆಸ್ ಸೇರ್ಪಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 24. ಮಾಜಿ ಸಂಸದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.


ಕಳೆದ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ಪ್ರಯತ್ನಿಸಿ ವಿಫಲರಾಗಿದ್ದ ಆಯನೂರು ಮಂಜುನಾಥ್ ಶಿವಮೊಗ್ಗ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದರು. ರಾಜ್ಯಸಭೆ, ಲೋಕಸಭೆ, ವಿಧಾನಸಭೆ ಹಾಗೂ ವಿಧಾನಪರಿಷತ್ ಹೀಗೆ ನಾಲ್ಕು ಸದನಗಳನ್ನು ಪ್ರತಿನಿಧಿಸಿರುವ ಆಯನೂರು ಮಂಜುನಾಥ್ ಇಂದು ಕಾಂಗ್ರೆಸ್ ಸೇರಲಿದ್ದಾರೆ. ಶಿಕಾರಿಪುರದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾಗರಾಜ ಗೌಡ ಸೇರಿದಂತೆ ಹಲವು ಮುಖಂಡರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Also Read  ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!?

error: Content is protected !!
Scroll to Top