ಆ.30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.24. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ದೊರೆಯಲಿದ್ದು, ಭರ್ಜರಿ ಸಿದ್ಧತೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.

ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2000 ರೂ. ಜಮೆ ಮಾಡಲಾಗುತ್ತಿದ್ದು, ಯೋಜನೆಗಾಗಿ ಅರ್ಜಿ ಸಲ್ಲಿಸಿದವರು ಮಾತ್ರ ಯೋಜನೆಯ ಫಲ ಪಡೆಯಬಹುದು. ಸಿಎಂ ಸಿದ್ದರಾಮಯ್ಯ ಕೂಡ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದ್ದು, ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಫಲಾನುಭವಿಗಳನ್ನು ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದೆ ಎನ್ನಲಾಗಿದೆ.

Also Read  ರೆಡ್ ಕ್ರಾಸ್ ಸಮಿತಿ➤ವಿಶೇಷ ಉಪನ್ಯಾಸ ಕಾರ್ಯಕ್ರಮ

error: Content is protected !!
Scroll to Top