ಆ. 27ರಂದು ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ಆ. 27ರಂದು ನಗರದ ಬಾವುಟಗುಡ್ಡೆಯ ಸೈಂಟ್ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಇತ್ತೀಚಿಗೆ ಸೈನ್ಯದಿಂದ ಸೇವಾ ನಿವೃತ್ತಿ ಪಡೆದವರು ಹಾಗೂ ಇದುವರೆಗೆ ಸದಸ್ಯತ್ವವನ್ನು ಪಡೆಯದ ಇತರೆ ಮಾಜಿ ಸೈನಿಕರು ಈ ಸಂದರ್ಭದಲ್ಲಿ ಸದಸ್ಯತ್ವ ಪಡೆಯಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್: 9739875269, 9844611608 ಸಂಪರ್ಕಿಸುವಂತೆ ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಭಾರತ -ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಸುಳ್ಯದಲ್ಲಿ ನುಡಿನಮನ

error: Content is protected !!
Scroll to Top