ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಮೃತ್ಯು- ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, . 24. ಪುತ್ತೂರು ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಹಾಡಹಗಲೇ ಯುವಕನೊಬ್ಬನ ಚೂರಿಯಿರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಯು ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂದು ತಿಳಿದು ಬಂದಿದೆ. ಈತ ಜೆಸಿಬಿ ಆಪರೇಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ಗೃಹಲಕ್ಷ್ಮೀ ಯೋಜನೆಯಡಿ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಕರೆ

error: Content is protected !!