ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಿದ ಪತಿ – ತೀವ್ರ ರಕ್ತಸ್ರಾವದಿಂದ ಪತ್ನಿ ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, . 24. ಪತಿಯೊಬ್ಬ ಯೂಟ್ಯೂಬ್‌ ನೋಡಿ ಹೆರಿಗೆ ಮಾಡಿಸಲು ಹೋದ ಕಾರಣ ತೀವ್ರ ರಕ್ತಸ್ರಾವವಾಗಿ ಪತ್ನಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಪೋಚಂಪಲ್ಲಿ ಸಮೀಪದ ಪುಲಿಯಂಪಟ್ಟಿ ನಿವಾಸಿ (27) ಲೋಗನಾಯಕಿ ಎಂದು ಗುರುತಿಸಲಾಗಿದೆ. ಗರ್ಭಿಣಿಯಾಗಿದ್ದ ಲೋಗನಾಯಕಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭ ಪತಿ ಮಾದೇಶ್ ಯೂಟ್ಯೂಬ್‌ ನೋಡಿಕೊಂಡು ಹೆರಿಗೆ ಮಾಡಿಸಲು ಪ್ರಯತ್ನಿಸಿದ್ದು, ಈ ವೇಳೆ ತೀವ್ರ ರಕ್ತಸ್ರಾವವಾಗಿ ಪತ್ನಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕರುಳು ಬಳ್ಳಿಯನ್ನು ಸರಿಯಾಗಿ ಕತ್ತರಿಸದ ಕಾರಣ ತೀವ್ರ ರಕ್ತಸ್ರಾವ ಉಂಟಾಗಿದ್ದು, ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಆದರೆ ಆದಾಗಲೇ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Also Read  ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ಅರೇಸ್ಟ್

error: Content is protected !!
Scroll to Top