ನಾಳೆ ಇಸ್ರೋ ಕಛೇರಿಗೆ ಪ್ರಧಾನಿ ಮೋದಿ ಭೇಟಿ – ವಾಹನ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 25. ಚಂದ್ರಯಾನ -3 ಯಶಸ್ಸಿಯಾದ ಹಿನ್ನೆಲೆ ನಾಳೆ ಇಸ್ರೋಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ.


ಮೋದಿಯ ಅಗಮನ ಹಿನ್ನೆಲೆ ನಗರದ ಹಲವು ರಸ್ತೆಗಳಲ್ಲಿ ಮುಂಜಾವ 4.30ರಿಂದ ಬೆಳಗ್ಗೆ 9.30ರ ವರೆಗೆ ಸಂಚಾರ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಗರದ ಹಳೇ ಏರ್​​ಪೋರ್ಟ್​ ರಸ್ತೆ, ಹಳೇ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ, ಸಿ.ವಿ.ರಾಮನ್ ರಸ್ತೆ, ಯಶವಂತಪುರ ಫ್ಲೈಓವರ್, ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ) ಮಾಗಡಿ ರಸ್ತೆ, ಗೊರಗುಂಟೆ ಪಾಳ್ಯ ಜಂಕ್ಷನ್‌ನಿಂದ ಸುಮನಹಳ್ಳಿ, ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್‌ ರಸ್ತೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

Also Read  ಕಡಬ: ದಲಿತ್ ಸೇವಾ ಸಮಿತಿ ವತಿಯಿಂದ ಸಮಾಲೋಚನಾ ಸಭೆ

ನಾಳೆ ಬೆಳಗ್ಗೆ 4ರಿಂದ ಬೆಳಗ್ಗೆ 11ರವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು, ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ನಗರ ಪೊಲೀಸರು ಮನವಿ ಮಾಡಿದ್ದಾರೆ.

error: Content is protected !!
Scroll to Top