ಲಾಂಗ್ ಹಿಡಿದು ಉಪನ್ಯಾಸಕನನ್ನೇ ಬೆದರಿಸಿದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಮಂಡ್ಯ, ಆ. 25. ಸರಿಯಾಗಿ ತರಗತಿಗೆ ಹಾಜರಾಗುತ್ತಿಲ್ಲ ಎಂದು ಪೋಷಕರಿಗೆ ಮಾಹಿತಿ ನೀಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಲಾಂಗ್‌ ಹಿಡಿದು ಉಪನ್ಯಾಸಕರನ್ನೇ ಬೆದರಿಸಿದ ಘಟನೆ ನಾಗಮಂಗಲದಿಂದ ಬೆಳಕಿಗೆ ಬಂದಿದೆ.


ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ತರಗತಿಗೆ ಸರಿಯಾಗಿ ಹಾಜರಾಗುತ್ತಿಲ್ಲ ಎಂದು ಉಪನ್ಯಾಸಕರೊಬ್ಬರು ತಿಳುವಳಿಕೆ ಹೇಳುವಂತೆ ಪೋಷಕರಿಗೆ ಮಾಹಿತಿ ನೀಡಿದ್ದರು. ಇದರಿಂದ ಸಿಟ್ಟಾದ ವಿದ್ಯಾರ್ಥಿ ಲಾಂಗ್ ತೋರಿಸಿ ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದು, ವೀಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ವಿದ್ಯಾರ್ಥಿಯಿಂದ ಬೈಕ್ ಹಾಗೂ ಲಾಂಗ್‍ನ್ನು ವಶಕ್ಕೆ ಪಡೆದು, ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಮತ್ತೊಮ್ಮೆ ಈ ರೀತಿ ಮಾಡದಂತೆ ತಿಳುವಳಿಕೆ ಹೇಳಿ ಕಳಿಸಿದ್ದಾರೆ ಎನ್ನಲಾಗಿದೆ.‌ ಈ ಕುರಿತು ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮುಡಾ ಕೇಸ್ ಪ್ರಕರಣ- ಆಗಸ್ಟ್ 31ಕ್ಕೆ ವಿಚಾರಣೆ ಮುಂದೂಡಿಕೆ

error: Content is protected !!
Scroll to Top