ಎರಡನೇ ಮಗುವಿನ ನಿರೀಕ್ಷೆಯಲ್ಲಿ ಪ್ರೇರಣಾ- ಧ್ರುವ ಸರ್ಜಾ ದಂಪತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 25. ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅವರು ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿಯನ್ನು ಕೊಟ್ಟಿದ್ದಾರೆ. ಸ್ಪೆಷಲ್‌ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ದಂಪತಿ ತಮ್ಮ ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.


ಕಳೆದ ವರ್ಷ ಅಕ್ಟೋಬರ್‌ನಲ್ಲಿ ಧ್ರುವ ಸರ್ಜಾ ಮತ್ತು ಪ್ರೇರಣಾ ದಂಪತಿ ಮನೆಗೆ ಹೆಣ್ಣು ಮಗುವಿನ ಆಗಮನವಾಗಿತ್ತು. ಇದೀಗ ಆ ಕುಟುಂಬಕ್ಕೆ ಮತ್ತೊಬ್ಬರು ಎಂಟ್ರಿ ಆಗಲಿರುವ ಶುಭ ಸುದ್ದಿಯನ್ನ ತಮ್ಮ ಸೋಷಿಯಲ್‌ ಮೀಡಿಯಾ ಅಕೌಂಟ್‌ನಲ್ಲಿ ಹಂಚಿಕೊಂಡಿದ್ದಾರೆ.

Scroll to Top