ಸರಣಿ ಕಳ್ಳತನ- ಅಂತರ್ಜಿಲ್ಲಾ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 27. ಬೆಳ್ತಂಗಡಿ ತಾಲೂಕು ಸೇರಿದಂತೆ ಹಲವೆಡೆ ಸರಣಿ ಕಳ್ಳತನಗೈದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ.


ಬಂಧಿತನನ್ನು ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ (50) ಎಂದು ಗುರುತಿಸಲಾಗಿದೆ. ಈತನ ಬಂಧನದೊಂದಿಗೆ ಇತ್ತೀಚೆಗೆ ಮುಂಡಾಜೆ, ಕಕ್ಕಿಂಜೆ, ಉಜಿರೆ, ಸೋಮಂತಡ್ಕ, ಕಲ್ಮಂಜ, ಕನ್ಯಾಡಿ, ಗುರುವಾಯನಕೆರೆ ನೆರಿಯ, ವೇಣೂರು ಮೊದಲಾದೆಡೆ ಸರಣಿ ಕಳ್ಳತನಗೈದಿದ್ದ ಅಂತರ್ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಈತ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟಿಯೊಂದನ್ನು ಕಳವುಗೈದು ಅದರಲ್ಲಿ ಸುತ್ತಾಡುತ್ತಾ ಒಬ್ಬಂಟಿಯಾಗಿ ರಾತ್ರಿ ವೇಳೆ ಹಲವೆಡೆ ಕಳ್ಳತನ ನಡೆಸುತ್ತಿರುವುದಾಗಿ ತನಿಖೆಯಿಂದ ದೃಢಪಟ್ಟಿದೆ. ಆರೋಪಿಯು ಕುಖ್ಯಾತ ಕಳ್ಳನಾಗಿದ್ದು ಈಗಾಗಲೇ ಈತನ ವಿರುದ್ದ ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವ, ಹಿರಿಯಡ್ಕ, ಪಡುಬಿದ್ರಿ, ಮುಲ್ಕಿ, ಹೆಬ್ರಿ, ಉಡುಪಿ ನಗರ ಹಾಗೂ ದಾವಣಗೆರೆ ಗ್ರಾಮಾಂತರ ಮತ್ತು ಬೆಳಗಾಂ ಮಾರ್ಕೆಟ್‌ ಪೊಲೀಸ್‌ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಾಗಿವೆ.

Also Read  ಕೊಣಾಜೆ: ಅಂಗನವಾಡಿ ಸಹಾಯಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಅರೆಸ್ಟ್

error: Content is protected !!
Scroll to Top