ಮಿತ್ತೂರು: ಲಾರಿ ಢಿಕ್ಕಿ ಹೊಡೆದು ರೈಲ್ವೇ ಮೇಲ್ಸೇತುವೆ ಕುಸಿತ ► ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.07. ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ರೈಲ್ವೇ ಮೇಲ್ಸೇತುವೆಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮೇಲ್ಸೇತುವೆ ಕೆಳಕ್ಕೆ ಕುಸಿದಿದ್ದು, ಕಂಟೈನರ್ ಲಾರಿಯು ರಸ್ತೆಗೆ ಅಡ್ಡಲಾಗಿ ನಿಂತಿರುವುದರಿಂದ ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಬೃಹತ್ ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ರೈಲ್ವೇ ಹಳಿಯಲ್ಲಿ ಬಿರುಕುಂಟಾಗಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶಿರಾಡಿ ಘಾಟ್ ರಸ್ತೆ ಕಾಮಗಾರಿ ಪ್ರಯುಕ್ತ ತಡೆಹಿಡಿಯಲಾಗಿರುವುದರಿಂದ ಮಾಣಿ ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಇದೀಗ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ಪುತ್ತೂರು ಹಾಗೂ ಮಂಗಳೂರು ಪ್ರಯಾಣಿಸುವ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ಹಲವರು ತೊಂದರೆ ಅನುಭವಿಸುವಂತಾಗಿದೆ.

Also Read  ಉಪ್ಪಿನಂಗಡಿ ಪೊಲೀಸರ ಮಿಂಚಿನ ಕಾರ್ಯಾಚರಣೆಗೆ ಅಡಿಕೆ ಕಳ್ಳರು ಅಂದರ್ ► ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಅಡಿಕೆ ವಶ

error: Content is protected !!
Scroll to Top