ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ – ಪ್ರಧಾನಿ ಮೋದಿ ಅಭಿನಂದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 28. ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ ಶಿಪ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾಗೆ ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಅಭಿನಂದಿಸಿದ್ದಾರೆ.


“ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಕೇವಲ ಅಥ್ಲೆಟಿಕ್ಸ್‌ನಲ್ಲಿ ಚಾಂಪಿಯನ್ ಆಗಿರದೆ ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿಸಿದೆ. ವಿಶ್ವದಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು” ಎಂದು ತಿಳಿಸಿದ್ದಾರೆ.

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರದಂದಜ ನಡೆದ ಪುರುಷರ ಜಾವೆಲಿನ್ ಥ್ರೋ ಫೈನಲ್ ನಲ್ಲಿ 88.17 ಮೀಟರ್ ದೂರ ಎಸೆಯುವ ಮೂಲಕ ಚಿನ್ನದ ಪದಕ ಬಾಚಿಕೊಂಡಿದ್ದರು.

Also Read  ಅಣಬೆ ಪ್ರಾಕೃತಿಕ ಆಹಾರ ಇದರ ಬಗ್ಗೆ ಜನತೆಗೆ ಇರಲಿ ಎಚ್ಚರ...!!!

error: Content is protected !!
Scroll to Top