ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಬೈಂದೂರು, ಆ. 28. ಇಲ್ಲಿನ ಶಿರೂರು ಭಾಗದಲ್ಲಿ ಮೀನುಗಾರಿಕೆಗಾಗಿ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ರವಿವಾರದಂದು ಸಂಜೆ ಅಳ್ವೆಗದ್ದೆಯಲ್ಲಿ ನಡೆದಿದೆ.

ಸಮುದ್ರ ಪಾಲಾದವರನ್ನು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(22) ಹಾಗೂ ನಝಾನ್(24) ಎಂದು ಗುರುತಿಸಲಾಗಿದೆ. ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿದ್ದ ಇವರು ಭಾನುವಾರದಂದು ಸಂಜೆ ಕೈರಂಪಣಿ ಮೀನುಗಾರಿಕೆಗೆಂದು ತೆರಳಿದ್ದರು. ಸಮುದ್ರ ಪ್ರಕ್ಷುಬ್ದ ಇರುವ ಕಾರಣ ಇಬ್ಬರು ಮೀನುಗಾರರು ಆಯತಪ್ಪಿ ಕಡಲ ಸಮುದ್ರ ಪಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿ ನಿರಂಜನ ಗೌಡ,ಅಗ್ನಿಶಾಮಕ ದಳ, ಕರಾವಳಿ ಕಾವಲು ಪಡೆ, ತಹಶೀಲ್ದಾರರು ಹಾಗೂ ಸ್ಥಳೀಯ ಮೀನುಗಾರರು ಭೀಟಿ ನೀಡಿದ್ದಾರೆ.

Also Read  ಅತಿಥಿ ಉಪನ್ಯಾಸಕರ ಹುದ್ದೆ - ಅರ್ಜಿ ಆಹ್ವಾನ

error: Content is protected !!
Scroll to Top