ಎಂಡಿಎಂಎ ಮಾದಕ ವಸ್ತು ಮಾರಾಟ – ಮಾದಕವಸ್ತು ಸಹಿತ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ನಗರದಾದ್ಯಂತ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ದಸ್ತಗಿರಿ ಮಾಡಿದ್ದಾರೆ.


ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ MDMA ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ MDMA ಎಂಬ ನಿಷೇದಿತ ಮಾದಕ ವಸ್ತು ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.

Also Read  ಕುಕ್ಕರ್ ಪ್ರಕರಣ ➤ನಾಲ್ವರ ಗುರುತು ಪತ್ತೆ

ಆರೋಪಿಗಳ ವಶದಿಂದ ಒಟ್ಟು 52 ಗ್ರಾಂ ತೂಕದ ರೂ. 2,60,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ವೋಕ್ಸ್ ವ್ಯಾಗನ್ ಕಾರು, ಮೊಬೈಲ್ ಫೋನುಗಳು-2, ನಗದು ರೂ. 1,800/- ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 7,83,300/-ಆಗಬಹುದು. ಆರೋಪಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top