ಇಂದು(ಆ. 29) ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಆ. 29ರ ಮಂಗಳವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ವಿವರ ಇಂತಿದೆ:
ಅವರು ಆ. 29ರ ಮಂಗಳವಾರ ಬೆಳಗ್ಗೆ 10 ರಿಂದ 12.30ರವರೆಗೆ ಜಿಲ್ಲೆಯ ವಿವಿಧ ಕಚೇರಿಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸುವರು. 12.30 ರಿಂದ 1 ಗಂಟೆಯವರೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡುವರು. ನಂತರ 2 ಗಂಟೆಯಿಂದ ಸಂಜೆ 6.30 ರ ವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಹಗ್ಗ ಜಗ್ಗಾಟ ಸ್ಪರ್ಧೆಯ ವೇಳೆ ಹೃದಯಾಘಾತ ➤ ವ್ಯಕ್ತಿ ಮೃತ್ಯು..!

error: Content is protected !!
Scroll to Top