ಆ. 31 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆ. 31ರ ಗುರುವಾರ ಸಂಜೆ 4 ಗಂಟೆಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು.
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ಸಂಗಪ್ಪ ತಂಗಡಿಗಿ ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್ ಯು, ಭಾಗೀರಥಿ ಮುರುಳ್ಯ, ಉಮಾನಾಥ ಎ. ಕೋಟ್ಯಾನ್, ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ, ಮಹಾಪೌರರಾದ ಜಯನಂದ ಅಂಚನ್ ಭಾಗವಹಿಸುವರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಮ್‍ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಮಂಗಳೂರಿನ ಸಂತ ಆಗ್ನೇಸ್ ಕಾಲೇಜಿನ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ ಅವರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಸಂದೇಶವನ್ನು ನೀಡುವರು ಎಂದು ಪ್ರಕಟಣೆ ತಿಳಿಸಿದೆ.

Also Read  Kometa Слоты | Топ казино в интернете, честное интернет казино

error: Content is protected !!
Scroll to Top