ಶಂಕಿತ ಉಗ್ರನ ಸಹಚರನ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಬೆಂಗಳೂರಿನ ಶಂಕಿತ ಉಗ್ರನ ಮನೆಯಲ್ಲಿ ಗ್ರೆನೇಡ್‌ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಮುಖ ಆರೋಪಿ ಜುನೈದ್ ನ , ಸಹಚರನೋರ್ವನನ್ನು ಬಂಧಿಸಿದ್ದಾರೆ.


ಬಂಧಿತನನ್ನು ಮೊಹಮ್ಮದ್‌ ಅರ್ಷದ್‌ ಎಂದು ಗುರುತಿಸಲಾಗಿದೆ. ರಾಜ್ಯ ರಾಜಧಾನಿಯಲ್ಲಿ ಇತ್ತೀಚೆಗೆ ಬಾಂಬ್‌ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪದಡಿ ಐವರು ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಈ ವೇಳೆ ಜುನೈದ್‌ ಸಹಚರ ಅರ್ಷದ್‌ ಎಂಬಾತ ನಾಪತ್ತೆಯಾಗಿದ್ದ. ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿರುವ ಅರ್ಷದ್‌ ವಿರುದ್ಧ 17 ಪ್ರಕರಣಗಳು ದಾಖಲಾಗಿದ್ದವು.

ಇನ್ನು ಅರ್ಷದ್ ಆರ್.ಟಿ ನಗರದ ಮನೆಯೊಂದರಲ್ಲಿ ವಾಸವಾಗಿರುವ ಮಾಹಿತಿ ತಿಳಿದ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಆತ ಮನೆಯಲ್ಲಿರುವುದನ್ನು ಖಚಿತಪಡಿಸಿ, ತಕ್ಷಣವೇ ಕಾರ್ಯಾಚರಣೆ ಪ್ರಾರಂಭಿಸಿ ಮನೆ ಬಾಗಿಲು ಒಡೆದು ಒಳ ಪ್ರವೇಶಿಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಚಾಕು ತೆಗೆದುಕೊಂಡಿದ್ದ ಅರ್ಷದ್​ ಕತ್ತು ಕೊಯ್ದುಕೊಳ್ಳಲು ಮುಂದಾಗಿದ್ದಾನೆ. ಅಲ್ಲದೇ ಎರಡನೇ ಮಹಡಿಯಿಂದ ಕೆಳಕ್ಕೆ ಜಿಗಿಯಲು ಮೇಲೆ ಹೋಗುತ್ತಿರುವಾಗ ಪೊಲೀಸರು ಆತನನ್ನು ಅಡ್ಡಗಟ್ಟಿ ‌ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Also Read  NCC ಕ್ಯಾಂಪ್‍ ಗೆ ತೆರಳಿದ್ದ ವಿದ್ಯಾರ್ಥಿ ನೀರು ಪಾಲು

error: Content is protected !!
Scroll to Top