ಸ್ನಾನಕ್ಕೆಂದು ಕೊಳಕ್ಕೆ ಇಳಿದ ಯುವಕ ನೀರಿ‌ನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 29. ಸ್ನೇಹಿತರ ಜತೆ ಸ್ನಾನಕ್ಕೆಂದು ತೆರಳಿ ಕೊಳಕ್ಕೆ ಇಳಿದಿದ್ದ ಯುವಕನೋರ್ವ ನೀರುಪಾಲಾಗಿರುವ ಘಟನೆ ಕೆಳಗಿನ ತಲಪಾಡಿ ಬಳಿ ಸಂಭವಿಸಿದೆ.


ಮೃತರನ್ನು ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ದಿ. ಸುಬ್ರಾಯ ಆಚಾರ್ಯ- ಉಮಾವತಿ ದಂಪತಿ ಪುತ್ರ ಹರಿಪ್ರಸಾದ್‌ ಆಚಾರ್ಯ(36) ಎಂದು ಗುರುತಿಸಲಾಗಿದೆ. ನಾಲ್ವರ ತಂಡವೊಂದು ತಲಪಾಡಿಯ ಖಾಸಗಿ ಜಾಗದಲ್ಲಿರುವ ಕೊಳಕ್ಕೆ ಸ್ನಾನಕ್ಕೆಂದು ಬಂದಿದ್ದು, ಈ ಪೈಕಿ ಹರಿಪ್ರಸಾದ್‌ ನೀರಿನಡಿಯ ಕೆಸರಿನಲ್ಲಿ ಸಿಲುಕಿ ಮುಳುಗಿದ್ದು, ಇದರಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ ಎನ್ನಲಾಗಿದೆ.

Scroll to Top