ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ – ಸಿಎಂ ಘೋಷಣೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 29. ಈ ಬಾರಿಯ ಮೈಸೂರು ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ನಾಳೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಸಿದ್ಧತೆ ನಡೆಯುತ್ತಿದ್ದು, ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಹರಕೆ ತೀರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಂದಿನ ದಸರಾವನ್ನು ಹಂಸಲೇಖ ಉದ್ಘಾಟಿಸುತ್ತಾರೆ ಎಂದು ಸಿಎಂ ಘೋಷಣೆ ಮಾಡಿದರು.

Also Read  ಅರಂತೋಡು: 75 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿ ವಿತರಣಾ ಕಾರ್ಯಕ್ರಮ

error: Content is protected !!
Scroll to Top