ಯುವತಿ ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಮಾಡಿದ ಅಪರಿಚಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 29. ಯುವತಿಯೋರ್ವಳು ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿನ‌ ಹಂಚಿನ ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ರಾತ್ರಿ ವೇಳೆ ಯುವತಿಯೋರ್ವಳು ಸ್ನಾನ ಮಾಡುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೋರ್ವ ಗೋಡೆಯ ಸೆರೆಯ ಮಧ್ಯೆ ಮೊಬೈಲ್ ಮೂಲಕ ವಿಡಿಯೋ ಸೆರೆ ಹಿಡಿಯುವುದು ಗಮನಕ್ಕೆ ಬಂದಿದೆ. ಇದನ್ನು ಕಂಡ ಯುವತಿ ಜೋರಾಗಿ ಬೊಬ್ಬೆ ಹಾಕಿದ್ದು, ಆರೋಪಿ ವ್ಯಕ್ತಿಯು ಅಲ್ಲಿಂದ ಕಾಲ್ಕಿತ್ತಿದ್ದ.

ಯುವತಿಯ ಬೊಬ್ಬೆ ಕೇಳಿ ಅವಳ ತಾಯಿ ಹಾಗೂ ನೆರೆಮನೆಯವರು ಓಡಿ ಬಂದು ವಿಷಯ ಕೇಳಿ, ಓಡಿಹೋದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಆದರೆ ಆತನ ಪತ್ತೆಯಾಗಿರಲಿಲ್ಲ. ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Scroll to Top