ಯುವಕನ ಕೊಲೆಯತ್ನ ಪ್ರಕರಣ- ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 12ರಂದು ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರ ಜೊತೆ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಝೀರ್ ಹಂಸ ಎಂಬಾತನು ಗಲಾಟೆ ಮಾಡಿ ಏಕಾಏಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಬಳಿಕ ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಆತನ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಇದೀಗ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ವಿಟ್ಲ: ಅಕ್ರಮ ಗಾಂಜಾ ಸಾಗಾಟ ➤ ಓರ್ವ ಅರೆಸ್ಟ್

error: Content is protected !!
Scroll to Top