ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 30. ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು `ಗೃಹಲಕ್ಷ್ಮೀ ಯೋಜನೆ’ಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ನಾಯಕರುಗಳು ಮೈಸೂರಿನಲ್ಲಿ ಬೀಡು ಬಿಟ್ಟಿದ್ದು, ಈ ನಡುವೆ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲೂ ಪ್ರಚಾರಕ್ಕೆ ವಿಶೇಷ ವ್ಯವಸ್ಥೆ ಮಾಡಿಸಲಾಗಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಸರ್ಕಾರವು 100 ದಿನ ಪೂರೈಸಿ, ನುಡಿದಂತೆ ನಡೆದಿದೆ. ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ ಹಿತ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಕಳೆದ ಮೇ. 20 ರಂದು ಅಸ್ತಿತ್ವಕ್ಕೆ ಬಂದ ರಾಜ್ಯ ಸರ್ಕಾರ ಹಲವು ‘ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲರ ಮನಃ ಗೆದ್ದಿದೆ ಎಂದರೂ ತಪ್ಪಾಗಲಾರದು.

Also Read  ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆಯಿಂದ ➤ ವಿಕಲಚೇತನರ ಅಹವಾಲು ಸ್ವೀಕಾರ

error: Content is protected !!
Scroll to Top