ಉಪ್ಪಿನಂಗಡಿ, ಬೆಳ್ತಂಗಡಿಯ ಹಲವು ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು ► ಖತರ್ನಾಕ್ ಕಳ್ಳ ಕೊಯಿಲ ನಿವಾಸಿ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.07. ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲವು ಕಳವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಖತರ್ನಾಕ್ ಕಳ್ಳನನ್ನು ಕಾರ್ಯಾಚರಣೆಯ ಮೂಲಕ ಬಂಧಿಸುವಲ್ಲಿ ಡಿಸಿಐಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಪುತ್ತೂರು ತಾಲ್ಲೂಕಿನ ಕೊಯಿಲ ನಿವಾಸಿ ಕಲಂದರ್ ಇಬ್ರಾಹಿಂ(28) ಎಂದು ಗುರುತಿಸಲಾಗಿದೆ. ಈತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲದಿನಗಳ ಹಿಂದೆ ನಡೆದ ಕಳ್ಳತನ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಬೇಕರಿ ಮತ್ತು ಕೋಳಿ ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದ ಎನ್ನಲಾಗಿದೆ. ಗಾಂಜಾ ಪ್ರಕರಣದಲ್ಲಿ ಜೈಲು ಸೇರಿದ್ದ ಈತ ಕಳ್ಳತನಕ್ಕೆ ಎರಡು ದಿನಗಳ ಮೊದಲು ಜೈಲಿನಿಂದ ಬಿಡುಗಡೆಗೊಂಡಿದ್ದನೆನ್ನಲಾಗಿದೆ‌. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಉಪ್ಪಿನಂಗಡಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

Also Read  ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

error: Content is protected !!
Scroll to Top