ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಆನೇಕಲ್, ಆ. 30. ಗಂಧದ ಮರ ಕಳ್ಳತನಕ್ಕೆಂದು ಬಂದಿದ್ದವರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ಪರಿಣಾಮ ಓರ್ವ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ಮತ್ತೋರ್ವ ಪರಾರಿಯಾಗಿರುವ ಕುರಿತು ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ ಎಂಬಲ್ಲಿ ನಡೆದಿದೆ.

ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ಎಂಬವರು ಫೈರಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ಇಲ್ಲಿ ಗಂಧದ ಮರಗಳ ಕಳ್ಳತನವಾಗುತ್ತಿದ್ದ ಹಿನ್ನೆಲೆ ಇದನ್ನು ತಡೆಯಲು ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನ ನಿಯೋಜಿಸಲಾಗಿತ್ತು. ಕಳ್ಳರು ರಾತ್ರಿ ಎರಡು ಗಂಟೆಯ ಸುಮಾರಿಗೆ ಗಂಧದ ಮರ ಕಳ್ಳತನಕ್ಕೆ ಬಂದಿದ್ದು, ಕಳ್ಳರನ್ನು ಕಂಡ ಗಸ್ತಿನಲ್ಲಿದ್ದ ಫಾರೆಸ್ಟ್ ಗಾರ್ಡ್ ಶರಣಾಗುವಂತೆ ಹೇಳಿದ್ದಾರೆ. ಆದರೆ ಅವರು ಪರಾರಿಯಾಗಲೆತ್ನಿಸಿದಾಗ ಫೈರಿಂಗ್ ಮಾಡಿದ್ದಾರೆ. ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ ಎನ್ನಲಾಗಿದೆ.

Also Read  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಓಮ್ನಿ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

error: Content is protected !!
Scroll to Top