ಸೆ. 11ರಿಂದ 13ರ ವರೆಗೆ ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ – ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆಯ ಹಿನ್ನೆಲೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಆ. 30. ಧರ್ಮಸ್ಥಳದ ಸೌಜನ್ಯಾ ಹತ್ಯೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಸೆ. 11ರಿಂದ 13ರ ವರೆಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ‘ಸೌಜನ್ಯಾ ಪ್ರಕರಣ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಬಾಲಕೃಷ್ಣ ಡಿ.ಬಿ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಧರಣಿ ಸತ್ಯಾಗ್ರಹ ಸೆ. 11ರಂದು ಬೆಳಗ್ಗೆ 10ಕ್ಕೆ ಆರಂಭಗೊಂಡು ಮೂರು ದಿನಗಳ ಕಾಲ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಬಳಿಕ ಪ್ರಕರಣದ ಮರುತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದರು.


ಸರಕಾರ ನಿವೃತ್ತ ನ್ಯಾಯಾಧೀಶರ ಮೂಲಕ ಮರುತನಿಖೆ ಮಾಡಿಸಬೇಕು. ತನಿಖಾಧಿಕಾರಿಯನ್ನು ತನಿಖೆಗೆ ಒಳಪಡಿಸಬೇಕು. ಮರು ತನಿಖೆಗೆ ಆದೇಶ ಮಾಡುವವರೆಗೂ ಹೋರಾಟವನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಕಾನೂನಾತ್ಮಕ ಹೋರಾಟ ಕೂಡ ನಡೆಸಲಾಗುವುದು ಎಂದು ಹೇಳಿದರು.

Also Read  ಕೋಡಿಂಬಾಳ ರೈಲ್ವೇ ನಿಲ್ದಾಣ ಎಕ್ಸ್‌ಪ್ರೆಸ್ ರೈಲು ನಿಲುಗಡೆ , ಮೂಲಭೂತ ಸೌಕರ್ಯ ಅಭಿವೃದ್ದಿ ಕನಸು ಮಾತ್ರ

error: Content is protected !!
Scroll to Top