ಅನಾರೋಗ್ಯ- ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಆ. 30. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಅಹಮ್ಮದ್‌ ಕುಂಜ್ಞಾ (78) ಎಂದು ಗುರುತಿಸಲಾಗಿದೆ. ಅಸ್ತಮಾ ಮತ್ತು ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೊಸಾಡು ಗ್ರಾಮದ ಮೊವಾಡಿ ಗಾಣದಮಕ್ಕಿಯಲ್ಲಿರುವ ಬಂಧುಗಳ ಮನೆಗೆ ಬಂದಿದ್ದರು. ಸಮೀಪದ ಗೇರು ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಾಗಿದೆ.

Scroll to Top