ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ- ಇಬ್ಬರಿಗೆ ಗಾಯ



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 07. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಪೆರಿಯಶಾಂತಿ- ಇಚ್ಲಂಪಾಡಿ ರಸ್ತೆಯ ನಡುಮನೆ ಎಂಬಲ್ಲಿ ಬುಧವಾರದಂದು ಮಧ್ಯಾಹ್ನ ನಡೆದಿದೆ.








ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕಾರಿನ ನಡುವೆ ಇಚ್ಲಂಪಾಡಿ ಗ್ರಾಮದ ನಡುಮನೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಹೆಡ್‌ ಕಾನ್ಸ್ಟೇಬಲ್ ಕುಶಾಲಪ್ಪ ನಾಯ್ಕ, ಕಾನ್‌ಸ್ಟೇಬಲ್ ಪ್ರತಾಪ್‌ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top