ರಸ್ತೆ ದಾಟುವ ವೇಳೆ ಆಟೋ ರಿಕ್ಷಾ ಢಿಕ್ಕಿ- ಪಾದಚಾರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 07. ರಸ್ತೆ ದಾಟುತ್ತಿದ್ದ ವೇಳೆ ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಾಯಗೊಂಡ ಘಟನೆ ಬಿ.ಸಿ.ರೋಡಿನ ಕೈಕಂಬದಲ್ಲಿ ಬುಧವಾರದಂದು ನಡೆದಿದೆ.

ಗಾಯಗೊಂಡವರನ್ನು ಇರಾ ನಿವಾಸಿ ಅಬ್ದುಲ್‌ ರಹಿಮಾನ್‌ ಎಂದು ಗುರುತಿಸಲಾಗಿದೆ. ರಹಿಮಾನ್ ರವರು ತರಕಾರಿ ಖರೀದಿಸಿ ರಸ್ತೆ ದಾಟುತ್ತಿದ್ದ ವೇಳೆ ರಿಕ್ಷಾವೊಂದು ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಈ ಕುರಿತು ಬಂಟ್ವಾಳ ಸಂಚಾರಿ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top