ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13. ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರದಂದು ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ.


ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿಯೋರ್ವರು ಬೆಂಗಳೂರು ನಗರದ ಬಂಡೇಪಾಳ್ಯ ಠಾಣೆಗೆ ದೂರು ನೀಡಿದ್ದರು. ಇದಕ್ಕೆ ಸಂಬಂಧಿಸಿ ಸೆ.13 ರಂದು ಸಂಜೆ ಕೋರ್ಟ್‌ ಮುಂದೆ ಹಾಜರಾಗಲಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಗಗನ್ ಕಡೂರು, ಶ್ರೀಕಾಂತ್ ನಾಯಕ್, ಪ್ರಸಾದ್ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Also Read  ಮಂಗಳೂರು: ಸೀಮೆಎಣ್ಣೆ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ

error: Content is protected !!
Scroll to Top